ದೇಶದ ರಾಜಧಾನಿಯಲ್ಲಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಶಿಕ್ಷಣದ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುತ್ತಿರುವುದು ದೇಶದಲ್ಲಿ ಬಹುದೊಡ್ಡ ಚರ್ಚೆಯ ವಿಷಯವಾಗಿದೆ ಅಸಲಿಗೆ ವಿದ್ಯಾರ್ಥಿಗಳ ಹೋರಾಟಕ್ಕೆ ಪ್ರತಿಭಟನೆಗೆ ಕಾರಣವೇನು ಎಂದು ತಿಳಿಯೋಣ
ಪ್ರತಿಭಟನೆಗೆ ಕಾರಣವೇನು?
ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಬಹು ಮುಖ್ಯ ಆದ್ಯತೆ ನೀಡಬೇಕು ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸರ್ಕಾರ ಗಮನ ಸೆಳೆಯುವುದು.ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ
ಸಂಸತ್ ಕಡೆಗೆ ಮೆರವಣಿಗೆ
ವಿದ್ಯಾರ್ಥಿಗಳು ಸಂಸತ್ ಕಡೆಗೆ ಮೆರವಣಿಗೆ ನಡೆಸಲು ಮುಂದಾದ ವೇಳೆ ಪೊಲೀಸರು ಭದ್ರತಾ ಕಾರಣಗಳಿಂದ ಹಲವು ಪ್ರದೇಶಗಳಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಿದರು. ಇದರಿಂದ ಕೆಲವೆಡೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾದಗಳು ಅತೀ ರೇಖಕ್ಕೆ ಹೋಗಿ ಪೋಲಿಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಬೇಕಾಯಿತು
ಘರ್ಷಣೆ ಮತ್ತು ಪೊಲೀಸ್ ಕ್ರಮ
ಪರಿಸ್ಥಿತಿಯನ್ನು ಸುದಾರಿಸಲು ಪೊಲೀಸರು ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಹೊಡೆದಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಬಹುದೊಡ್ಡ ಚರ್ಚೆಗೆ ಕಾರಣವಾಗಿದೆ. ಇದರ ಪರಿಣಾಮವಾಗಿ ಹಲವು ಪ್ರತಿಭಟನಾಕಾರರು ಮತ್ತು ಕೆಲ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿಯೂ ಹೊರಬಂದಿದೆ.
ಸರ್ಕಾರ ಏನು ಹೇಳಿದೆ?
ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಆದ್ಯತೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕ್ರಿಯೆ
ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ “ನಮ್ಮ ಯುವಕರ ಕಲ್ಯಾಣ ಮತ್ತು ಭವಿಷ್ಯಕ್ಕಿಂತ ಬೇರೇನೂ ಮುಖ್ಯವಲ್ಲ!
ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ವಿಧಿಸಲು ನಾವು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇವೆ. ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಕಾಪಾಡುವ ನಮ್ಮ ಕ್ರಮಗಳ ಸರಣಿಯನ್ನು ಇದು ಮುಂದುವರಿಸುತ್ತದೆ.ನಮ್ಮ ಯುವಕರ ಭವಿಷ್ಯಕ್ಕೆ ಹಾನಿ ಮಾಡಲು ಪ್ರಯತ್ನಿಸುವವರನ್ನು ಸುಮ್ಮನೆ ಬಿಡುವುದಿಲ್ಲ.ನರೇಂದ್ರಮೋದಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವವರಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ವಿಧಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು”. ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಪ್ರಸ್ತುತ ಪರಿಸ್ಥಿತಿ ಹೇಗಿದೆ?
ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರತಿಭಟನೆ ನಡೆಸಿದ ಸಂಘಟನೆಗಳು ತಮ್ಮ ಬೇಡಿಕೆಗಳನ್ನು ಮುಂದುವರಿಸುವುದಾಗಿ ತಿಳಿಸಿವೆ. ಆದರೆ ಸದ್ಯಕ್ಕೆ ದೊಡ್ಡ ಮಟ್ಟದ ಮೆರವಣಿಗೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಈ ಪ್ರತಿಭಟನೆ ಏಕೆ ಮಹತ್ವದ್ದು?
ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಹಕ್ಕುಗಳ ಕುರಿತು ದೇಶಾದ್ಯಂತ ಚರ್ಚೆಯನ್ನು ಹುಟ್ಟುಹಾಕಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಕೈಗೊಳ್ಳುವ ನಿರ್ಧಾರಗಳು ಮತ್ತು ಪ್ರತಿಭಟನಾ ಸಂಘಟನೆಗಳ ಮುಂದಿನ ನಡೆ ಎಲ್ಲರ ಗಮನ ಸೆಳೆದಿವೆ. ಇತ್ತೀಚಿಗೆ ನೆಡೆದ NEET paper leak ಅದರಿಂದ ಹಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು .ಇತ್ಯಾದಿ
ಇದು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗಾಗಿ ವಿದ್ಯಾರ್ಥಿಗಳು ವ್ಯಕ್ತಪಡಿಸಿರುವ ಅಸಮಾಧಾನದ ಸಂಕೇತವಾಗಿದೆ. ಸರ್ಕಾರದ ಮುಂದಿನ ಕ್ರಮ ಹಾಗೂ ಪ್ರತಿಭಟನೆಯ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ಇನ್ನಷ್ಟು ಮಹತ್ವ ಪಡೆದುಕೊಳ್ಳುವ ಸಾಧ್ಯತೆಯಿದೆ. ಈ ಪ್ರತಿಭಟನೆಗೆ ಹಲವರು ಬೆಂಬಲಿಸಿದರೆ ಇನ್ನೂ ಕೆಲವರು ಈ ಪ್ರತಿಭಟನೆಗೆ ಬೆಂಬಲಿಸುತ್ತಿಲ್ಲ
ಏನೇ ಆದರೂ ಶಿಕ್ಷಣ ಕ್ಷೇತ್ರಕ್ಕೆ ಬಹು ದೊಡ್ಡ ಜವಾಬ್ದಾರಿ ಇರುತ್ತದೆ . ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರಗಳಲ್ಲಿ ಅಭಿವೃದ್ಧಿಯಾಗಬೇಕು ಯಾವುದೇ ರೀತಿಯಲ್ಲೂ ಕಷ್ಟಪಟ್ಟು ಓದುವಂತಹ ವಿದ್ಯಾರ್ಥಿಗಳಿಗೆ ಮೋಸ ಆಗದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು