ಮೈಸೂರಿನ ಸರಸ್ವತಿಪುರಂನಲ್ಲಿ ಯುವತಿ ಸಂಧ್ಯಾ ಅವರ ನಿಗೂಢ ಸಾವಿನ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಆತ್ಮಹತ್ಯೆಯಲ್ಲ, ಕೊಲೆ ಎಂದು ಕುಟುಂಬದವರು ಆರೋಪಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಘಟನೆ ಹೇಗೆ ಬೆಳಕಿಗೆ ಬಂತು?
ಮೈಸೂರಿನ ಸರಸ್ವತಿಪುರಂನಲ್ಲಿ ವಾಸವಾಗಿದ್ದ 30 ವರ್ಷದ ಸಂಧ್ಯಾ ರವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅವರ ಪತಿ ಅಕ್ಷಯ್ ಅವರು ಅತ್ತೆ ಗೀತಾ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಕುಟುಂಬದವರ ಆರೋಪ
“ನನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿತ್ವ ಹೊಂದಿರಲಿಲ್ಲ. ಆಕೆಯನ್ನು ಕೊಲೆ ಮಾಡಿ ಬಳಿಕ ನೇಣು ಹಾಕಲಾಗಿದೆ” ಎಂದು ಸಂಧ್ಯಾ ಅವರ ತಾಯಿ ಆರೋಪಿಸಿದ್ದಾರೆ ಘಟನೆ ನಡೆದ ಬಳಿಕ ಪತಿ ಅಕ್ಷಯ್ ಸ್ಥಳದಲ್ಲಿ ಕಾಣಿಸದಿರುವುದು ಅನುಮಾನವನ್ನು ಮತ್ತಷ್ಟು ಹೆಚ್ಚಿಸಿದೆ
ಕುಟುಂಬದವರ ಆಕ್ರಂದನ
ತಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಮಕ್ಕಳು ಕಣ್ಣೀರು ಹಾಕುತ್ತಿರುವ ದೃಶ್ಯ ಸ್ಥಳೀಯರ ಮನಕಲಕುವಂತಿತ್ತು.ಘಟನೆ ನಡೆದ ವೇಳೆ ಮನೆಯಲ್ಲಿ ಸಂಧ್ಯಾ ಅವರ ಇಬ್ಬರು ಪುಟ್ಟ ಮಕ್ಕಳು ಮಾತ್ರ ಇದ್ದರು ಎನ್ನಲಾಗಿದೆ.ಸಂಬಂಧಿಕರು ಮತ್ತು ನೆರೆಹೊರೆಯವರು ಕುಟುಂಬದವರಿಗೆ ಸಾಂತ್ವನ ಹೇಳಲು ಪ್ರಯತ್ನಿಸಿದರು.
ಪೊಲೀಸರ ತನಿಖೆ ಮುಂದುವರಿಕೆ
ಸಾವಿನ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.ಈ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ.
ನ್ಯಾಯಕ್ಕಾಗಿ ಪ್ರತಿಭಟನೆ
ಗಂಡನೊಂದಿಗೆ ಪದೇ ಪದೇ ಜಗಳವಾಗುತ್ತಿದ್ದರೂ ಕುಟುಂಬಕ್ಕಾಗಿ ಮೌನವಾಗಿದ್ದಳು. ಮಕ್ಕಳಿಗಾಗಿ ಎಲ್ಲವನ್ನೂ ಸಹಿಸಿಕೊಂಡು ಬದುಕುತ್ತಿದ್ದ ಸಂಧ್ಯಾಳ ಬದುಕು ದುರಂತ ಅಂತ್ಯ ಕಂಡಿದೆ. ಎಂದೂ ಅವರ ತಾಯಿ ಆರೋಪಿಸಿದ್ದಾರೆ ಪೋಷಕರು, ಸರಸ್ವತಿಪುರಂ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.