ಉದ್ಯೋಗಾಕಾಂಕ್ಷಿಗಳು ಹಾಗೂ ಯುವಕರು ಒಂದೇ ವೇದಿಕೆಯಲ್ಲಿ ಸೇರಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಈ ಪ್ರತಿಭಟನೆಯು ಈಗ ರಾಷ್ಟ್ರದಾದ್ಯಂತ ಚರ್ಚೆಯ ವಿಷಯವಾಗಿದೆ.
ಪ್ರತಿಭಟನೆಗೆ ಕಾರಣವೇನು?
ಇತ್ತೀಚಿನ ವರ್ಷಗಳಲ್ಲಿ ನೇಮಕಾತಿ ಪ್ರಕ್ರಿಯೆಯ ವಿಳಂಬ ಮತ್ತು ಪಾರದರ್ಶಕತೆಯ ಕೊರತೆ.ವಿವಿಧ ಪರೀಕ್ಷೆಗಳ ಪೇಪರ್ ಲೀಕ್ ಪ್ರಕರಣಗಳು ಈ ಎಲ್ಲಾ ವಿಷಯಗಳೇ ಯುವಕರಲ್ಲಿ ಹೆಚ್ಚುತ್ತಿರುವ ಅಸಮಾಧಾನದಿಂದ ಪ್ರತಿಭಟನೆಗೆ ಕಾರಣವಾಗಿದೆ ಅನೇಕ ಅಭ್ಯರ್ಥಿಗಳು ತಮ್ಮ ವರ್ಷಗಳ ಶ್ರಮ ಮತ್ತು ಸಿದ್ಧತೆಗೆ ನ್ಯಾಯ ಸಿಗುತ್ತಿಲ್ಲ ಎಂಬ ಭಾವನೆ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಪರೀಕ್ಷಾ ಪ್ರಕ್ರಿಯೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ಆಗ್ರಹಿಸುವಂತೆ ಪ್ರತಿಭಟನೆಯಲ್ಲಿ ಭಾಗವಹಿಸಿದವರ ಮಾತಿನಲ್ಲಿ ಕಂಡುಬಂದಿದೆ.ಯುವಕರ ಭವಿಷ್ಯಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳು ಹೆಚ್ಚು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕಾಗಿದೆ. ಎಂಬುದು ಪ್ರತಿಭಟನೆಯ ಮುಖ್ಯ ವಿಷಯವಾಗಿತ್ತು
ಪರಿಣಾಮ
ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಮಂದಿ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದು, ಯುವಕರ ಸಮಸ್ಯೆಗಳ ಬಗ್ಗೆ ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆರಂಭವಾಗಿದೆ.ಈ ಪ್ರತಿಭಟನೆ ಶಾಂತಿಯುತವಾಗಿ ನಡೆದಿದ್ದರೂ, ಅದರ ಸಂದೇಶ ದೇಶದ ಮೂಲೆಮೂಲೆಗೂ ತಲುಪಿದೆ
ಈ ಘಟನೆಯು ಆನೇಕ ಯುವಕರ ಮನಸ್ಥಿತಿಯ ಪ್ರತಿಬಿಂಬಿಸುವ ಘಟನೆಯಾಗಿದೆ. ಶಿಕ್ಷಣ, ಉದ್ಯೋಗ ಮತ್ತು ಭವಿಷ್ಯದ ಭದ್ರತೆ ಕುರಿತು ಯುವಕರು ಹೊಂದಿರುವ ನಿರೀಕ್ಷೆಗಳು ಮತ್ತು ಆತಂಕಗಳು ಈ ಮೂಲಕ ಸ್ಪಷ್ಟವಾಗಿ ಹೊರಬಂದಿವೆ.
ಪ್ರಸ್ತುತ ಈ ಪ್ರತಿಭಟನೆ ದೇಶದ ಟ್ರೆಂಡಿಂಗ್ ವಿಷಯಗಳಲ್ಲಿ ಒಂದಾಗಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮ ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರಗಳ ಮೇಲೂ ಕಾಣಿಸಬಹುದೆಂಬ ಚರ್ಚೆ ನಡೆಯುತ್ತಿದೆ.